ಮಂಗಳೂರಿನಲ್ಲಿ ನಡೆದಿರುವ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಅವರ ಕೈವಾಡವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಬಿಜೆಪಿ ಪರಿವರ್ತನಾ ಯಾತ್ರೆಗೂ ಮುನ್ನು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೀಪಕ್ ಶವವನ್ನು ಮನೆಯವರಿಗೆ ಒಪ್ಪಿಸದೆ ಅವರ ಮನೆಗೆ ಕಾಂಗ್ರೆಸ್ನವರು ತಲುಪಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಕೂಡ ಕಾರಣರಾಗಿದ್ದಾರೆ ಎಂದು ಟೀಕಿಸಿದರು. ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಲಾಗುತ್ತಿದೆ. ಇದಕ್ಕೆ