ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಟ್ವೀಟರ್ ನಲ್ಲಿ ಕಾಂಗ್ರೆಸ್ ಘಟಕ ವಾಗ್ದಾಳಿ

ಬೆಂಗಳೂರು| pavithra| Last Modified ಸೋಮವಾರ, 5 ಏಪ್ರಿಲ್ 2021 (12:21 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಎಸ್ ಐಟಿ ಹಾಗೂ ಸರ್ಕಾರದ ವಿರುದ್ಧ  ಟ್ವೀಟರ್ ನಲ್ಲಿ ಕಾಂಗ್ರೆಸ್ ಘಟಕ  ವಾಗ್ದಾಳಿ ನಡೆಸಿದ್ದಾರೆ.

ಯುವತಿಯನ್ನು ಆರೋಪಿಯಂತೆ ವಿಚಾರಣೆ ನಡೆಸಲಾಗ್ತಿದೆ. ಅತ್ಯಾಚಾರ ಆರೋಪಿಗೆ ನೆಪ ಮಾತ್ರಕ್ಕೆ ವಿಚಾರಣೆ. ರಮೇಶ್ ಗೆ ಅನಾರೋಗ್ಯವೋ? ತಲೆಮರೆಸಿಕೊಳ್ಳುವ ತಂತ್ರವೋ? ಪೊಲೀಸರು ಆರೋಪಿ ತಲೆಮರೆಸಿಕೊಳ್ಳುವ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಎಂದು ಆರೋಪಿಸಿದ್ದಾರೆ.

ಅಲ್ಲದೇ  ಆರೋಪಿಯನ್ನು ವಿಚಾರಣೆಗೆ ಕರೆಸಿ ಹಿಂಬಾಗಿಲಿನಿಂದ ಕಳಿಸ್ತಾರೆ.  ಸಂತ್ರಸ್ತೆಗೆ ವಿಶ್ರಾಂತಿಯೂ ನೀಡದೆ ಸತತ ವಿಚಾರಣೆ  ನಡೆಸುತ್ತಿದ್ದಾರೆ. ಸಂತ್ರಸ್ತೆ ದೂರಿನಲ್ಲಿ ಆರೋಪಿ ಹೆಸರು ನೇರವಾಗಿ ಉಲ್ಲೇಖವಿದೆ. ಆದರೂ ಬಂಧನವಿಲ್ಲ, ಸಮರ್ಪಕ ವಿಚಾರಣೆಯೂ ಇಲ್ಲ. ಸಾಕ್ಷ್ಯ ನಾಶಕ್ಕೆ ಸಾಕಷ್ಟು ಸಮಯ ಬೇಕಿತ್ತೋ ಏನೋ! ಎಂದು ಅವರು ಕಿಡಿಕಾರಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :