ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿಯಲ್ಲಿದ್ದ ಯುವತಿ ನಿನ್ನೆ ದಿಡೀರ್ ಆಗಿ ಸಾಮಾಜಿಕ ಜಾಲತಾಣದ ಮೂಲಕ ಪ್ರತ್ಯಕ್ಷಳಾಗಿದ್ದಾಳೆ. ಪ್ರಕರಣವನ್ನು ಎಸ್ ಐಟಿ ತನಿಖೆ ನಡೆಸುತ್ತಿದ್ದು, ಕೆಲವರನ್ನು ವಶಕ್ಕೆ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸಿದ ಯುವತಿ, ನನಗೆ ರಮೇಶ್ ಜಾರಕಿಹೊಳಿ ಕೆಲಸ ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದಾರೆ ಎಂದು ದೂರಿದ್ದಾಳೆ.‘ಸಿಡಿಯನ್ನು ರಮೇಶ್ ಜಾರಕಿಹೊಳಿಯೇ ಬಿಡುಗಡೆ ಮಾಡಿದ್ದಾರೆ. ನನಗೆ ಅವರಿಂದ ಮೋಸ ಆಗಿದೆ. ಘಟನೆ ಬಹಿರಂಗವಾದ ಬಳಿಕ