ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ರಮೇಶ್ ಜಾರಕಿಹೊಳಿ

ಬೆಳಗಾವಿ| Krishnaveni K| Last Modified ಬುಧವಾರ, 7 ಏಪ್ರಿಲ್ 2021 (10:00 IST)
ಬೆಳಗಾವಿ: ಕೊರೋನಾ ಸೋಂಕಿತರಾಗಿ ಗೋಕಾಕ್ ನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದೀಗ ಡಿಸ್ಚಾರ್ಜ್ ಆಗಿದ್ದಾರೆ.

 

ರಮೇಶ್ ಜಾರಕಿಹೊಳಿ ಉಸಿರಾಟದಲ್ಲಿ ಏರುಪೇರಾಗಿದ್ದರಿಂದ ಏಪ್ರಿಲ್ 4 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಏಪ್ರಿಲ್ 1 ರಿಂದ ಅವರು ಕೊರೋನಾದಿಂದ ಬಳಲುತ್ತಿದ್ದರು ಎನ್ನಲಾಗಿದೆ.
 
ಇದೀಗ ಗುಣಮುಖರಾದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನು, ಸಿಡಿ ಪ್ರಕರಣದಲ್ಲಿ ವಿಚಾರಣೆಗೊಳಪಡಬೇಕಿದ್ದ ರಮೇಶ್ ಜಾರಕಿಹೊಳಿ ಅನಾರೋಗ್ಯ ಸಮಸ್ಯೆಯಿಂದಾಗಿ ಹಾಜರಾಗಿರಲಿಲ್ಲ. ಹೀಗಾಗಿ ಎಸ್ ಐಟಿ ತಂಡ ಆಸ್ಪತ್ರೆಗೆ ಭೇಟಿ ನೀಡಿತ್ತು.




ಇದರಲ್ಲಿ ಇನ್ನಷ್ಟು ಓದಿ :