ಬೆಂಗಳೂರು: ಸ್ವಪಕ್ಷೀಯರೇ ತಮ್ಮ ವಿರುದ್ಧ ಮಸಲತ್ತು ಮಾಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಮುಂಬೈಗೆ ಪ್ರಯಾಣ ಬೆಳೆಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿಗೆ ಸೇರ್ಪಡೆಯಾಗಲು ಪ್ರಮುಖ ಕಾರಣರಾಗಿದ್ದ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ರನ್ನು ಮೊನ್ನೆಯಷ್ಟೇ ಭೇಟಿಯಾಗಿದ್ದ ರಮೇಶ್ ಜಾರಕಿಹೊಳಿ ಮಾತುಕತೆ ನಡೆಸಿದ್ದರು. ಇದೀಗ ಮತ್ತೆ ಮುಂಬೈಗೆ ತೆರಳುತ್ತಿದ್ದು, ಮತ್ತೊಮ್ಮೆ ಫಡ್ನವಿಸ್ ಜೊತೆ ಮಾತುಕತೆ ನಡೆಸುತ್ತಾರೆ ಎನ್ನಲಾಗಿದೆ.ಇನ್ನು, ಅಗತ್ಯಬಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲೂ