ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾ

ಬೆಂಗಳೂರು| Krishnaveni K| Last Modified ಮಂಗಳವಾರ, 6 ಏಪ್ರಿಲ್ 2021 (09:29 IST)
ಬೆಂಗಳೂರು: ಸಿಡಿ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಶಾಸಕ ರಮೇಶ್ ಜಾರಕಿಹೊಳಿಗೆ ಈಗ ಮತ್ತೊಂದು ಕಂಟಕ ಎದುರಾಗಿದೆ.

 

ಶಾಸಕ ರಮೇಶ್ ಜಾರಕಿಹೊಳಿ ಈಗ ಕೊರೋನಾದಿಂದ ಬಳಲುತ್ತಿರುವ ಸುದ್ದಿ ಬಂದಿದೆ. ಸದ್ಯಕ್ಕೆ ಅವರು ಗೋಕಾಕ್ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ನಾಲ್ಕು ದಿನ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
 
ಆದರೆ ಕಾಂಗ್ರೆಸ್ ಈ ಬಗ್ಗೆ ವ್ಯಂಗ್ಯ ಮಾಡಿದ್ದು, ಎಸ್ ಐಟಿ ತನಿಖೆಯಿಂದ ತಪ್ಪಿಸಿಕೊಳ್ಳಲು ಜಾರಕಿಹೊಳಿ ಈ ನಾಟಕವಾಡುತ್ತಿದ್ದಾರೆ ಎಂದಿದೆ. ನಿನ್ನೆ ಎಸ್ ಐಟಿ ರಮೇಶ್ ಜಾರಕಿಹೊಳಿಗೆ ವಿಚಾರಣೆಗೆ ಬುಲಾವ್ ನೀಡಿತ್ತು. ಆದರೆ ಅನಾರೋಗ್ಯದ ನೆಪವೊಡ್ಡಿ ಅವರು ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಇದೀಗ ಕೊರೋನಾ ಬಂದಿರುವ ಸುದ್ದಿ ಬಂದಿದೆ.
ಇದರಲ್ಲಿ ಇನ್ನಷ್ಟು ಓದಿ :