ಬೆಂಗಳೂರು: ಉಪಚುನಾವಣೆಯ ಗೆಲುವಿನ ಬಳಿಕ ಇದೀಗ ಸಿಎಂ ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ವಿಸ್ತರಣೆ ಮಾಡುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ ಎನ್ನಲಾಗಿದೆ.ಹೌದು. ಈ ಮೊದಲು 4ನೇ ಡಿಸಿಎಂ ಹುದ್ದೆಗಾಗಿ ರಮೇಶ್ ಜಾರಕಿಹೊಳಿ ಹಾಗೂ ಶ್ರೀರಾಮುಲು ಪಟ್ಟು ಹಿಡಿದಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಗೊಂದಲಕ್ಕೀಡಾಗಿದ್ದರು. ಆದರೆ ಇದೀಗ ಪ್ರಮುಖ ಖಾತೆಯಾದ ಜಲಸಂಪನ್ಮೂಲ ಖಾತೆ ತಮಗೆ ನೀಡಬೇಕೆಂದು ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ ರಮೇಶ್ ಜಾರಕಿಹೊಳಿಗೆ ಈ