Widgets Magazine

ಸಿದ್ದರಾಮಯ್ಯರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ರಮೇಶ್ ಜಾರಕಿಹೊಳಿ

ಬೆಂಗಳೂರು| pavithra| Last Updated: ಶುಕ್ರವಾರ, 13 ಡಿಸೆಂಬರ್ 2019 (11:40 IST)
ಬೆಂಗಳೂರು : ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಅವರನ್ನು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ವಿಚಾರಿಸಿದ್ದಾರೆ.


ಸಿದ್ದರಾಮಯ್ಯ ಹೃದಯ ಸಂಬಂಧಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.  ಅವರಿಗೆ ಸ್ಟಂಟ್ ಅಳವಡಿಸಲಾಗಿತ್ತು. ಈಗ ಚೇತರಿಸಿಕೊಂಡ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಇದೀಗ ರಮೇಶ್ ಜಾರಕಿಹೊಳಿ ಸಿದ್ದರಾಮಯ್ಯ ಅವರನ್ನು ನೋಡಲು ಆಸ್ಪತ್ರೆಗೆ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ.
 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಪಕ್ಷ ಬದಲಾವಣೆ ಮಾಡಿದರೂ ಅವರು ನಮ್ಮ ಗುರುಗಳು. ಅವರು ಈಗ ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :