ಚಿತ್ರದುರ್ಗ : ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆಯಿಂದಲೇ ಬಿಜೆಪಿಯವರು ಎಳೆ ವಯಸ್ಸಿನ ಮಕ್ಕಳಿಗೆ ವಿಷ ಉಣಿಸುತ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು.ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ದಾರ್ಶನಿಕರಿಗೆ ಬಿಜೆಪಿ ಅಪಮಾನ ಮಾಡುತ್ತಿದೆ ಎಂಬ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ವಿಚಾರ ಬೇಡ ಅಂದ್ರೆ ಮಕ್ಕಳಿಗೆ ಇನ್ನೇನು ಹೇಳುವುದು. ಜನರೇ ಮೌನವಾಗಿದ್ದಾಗ ಏನು ಮಾಡಲು ಸಾಧ್ಯವಿಲ್ಲ. ಆದ್ರೆ ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ