ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಯು ಕದಡಿದ ನೀರಂತಾಗಿದೆ. ಕಳೆದ ಲೋಕಸಭಾ ಎಲೆಕ್ಷನ್ನಲ್ಲಿ ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರಾಭವ ಆದ ನಂತ್ರ ನಾಯಕರ ಮಧ್ಯೆ ವೈಮನಸ್ಸು ಮತ್ತಷ್ಟು ಹೆಚ್ಚಾಗಿದೆ.ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದ ಕಾಂಗ್ರೆಸ್ ಶಾಸಕರು ಹಾಗೂ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವ್ರ ಹಿಂಬಾಲಕರ ಮಧ್ಯೆ ಆರೋಪ-ಪ್ರತ್ಯಾರೋಪಗಳು ಜೋರಾಗಿ ನಡೆಯುತ್ತಿವೆ.ಕಾಂಗ್ರೆಸ್ ಹಿರಿಯ ನಾಯಕರೆನಿಸಿದ್ದ ಕೆ.ಎಚ್.ಮುನಿಯಪ್ಪ 2019 ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ಎದುರು ಪರಾಭವಗೊಂಡ್ರು. ಮಾಜಿ ಸ್ಪೀಕರ್ ರಮೇಶ್