ಮೈಸೂರು : ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ ಇದರ ತನಿಖೆ ಎಸ್ ಐಟಿಗೆ ನೀಡಿದ್ದು ತಿಪ್ಪೆ ಸಾರಿಸುವ ಕೆಲಸವಷ್ಟೇ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ತನಿಖೆ ನಡೆಸುವಂತೆ ರಮೇಶ್ ಜಾರಕಿಹೊಳಿ ಸರ್ಕಾರಕ್ಕೆ ಮನವಿ ಮಾಡಿದ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಎಸ್ ಐಟಿ ತನಿಖೆಗೆ ನೀಡಲಾಗಿದೆ.ಮೈಸೂರಿನಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಎಸ್ ಐಟಿ ತನಿಖೆಯಿಂದ