ಮೈತ್ರಿ ಸರಕಾರದಲ್ಲಿ ಶಾಸಕ ಸ್ಥಾನಕ್ಕೆ ಕೈ ಪಡೆಯ ನಾಯಕರು ರಾಜೀನಾಮೆ ನೀಡಿರುವ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಾಸಕರ ವಿರುದ್ಧ ಜೆಡಿಎಸ್ ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ರಮೇಶ ಜಾರಕಿಹೊಳಿ ಹಣದ ಬೇಡಿಕೆ ಇಟ್ಟಿದ್ದರು ಎಂಬರ್ಥದಲ್ಲಿ ಪಿರಿಯಾಪಟ್ಟಣ ಜೆಡಿಎಸ್ ಶಾಸಕ ಕೆ.ಮಹದೇವ್ ಹೊಸ ಸುದ್ದಿ ಸ್ಫೋಟ ಮಾಡಿದ್ದಾರೆ.ಕೇವಲ ಹಣಕ್ಕಾಗಿ ರಮೇಶ್ ಜಾರಕಿಹೊಳಿ ಅವರು ಪಕ್ಷಾಂತರ ಮಾಡುತ್ತಿದ್ದಾರೆ ಎಂಬರ್ಥದಲ್ಲಿ ಮಹದೇವ್ ಹೇಳಿಕೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಚರ್ಚೆಗೆ ಶುರುವಾಗಲು ನಾಂದಿ