ಬೆಂಗಳೂರು (ಆ.13): ರಮೇಶ್ ಜಾರಕಿಹೊಳಿ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಅನುಪಸ್ಥಿತಿಯಲ್ಲಿ ನಡೆದಿರುವ ತನಿಖೆಯನ್ನು ಮರುಪರಿಶೀಲಿಸುವ ಅಗತ್ಯವಿಲ್ಲ ಎಂದು ಎಸ್ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಹೈಕೋರ್ಟ್ಗೆ ಸ್ಪಷ್ಟಪಡಿಸಿದ್ದಾರೆ. ರಮೇಶ್ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಮತ್ತು ತನಿಖೆಯ ಮೇಲ್ವಿಚಾರಣೆಯನ್ನು ಹೈಕೋರ್ಟ್ ವಹಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸ್ತಕಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಗುರುವಾರ