ಸಾರಿಗೆ ನೌಕರರ ಸಮಸ್ಯೆ ಪರಿಹರಿಸಲು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರೇ ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಭಿಪ್ರಾಯ ಪಟ್ಟಿದ್ದಾರೆ. ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆದಿದ್ದ ಶಾಸಕಾಂಗ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಾರಿಗೆ ನೌಕರರ ಜೊತೆ ಸಂಧಾನ ಸಭೆ ನಡೆಸಲು ಸಚಿವ ರಾಮಲಿಂಗಾ ರೆಡ್ಡಿ ಅವರೇ ಸೂಕ್ತ ಎಂದು