ಮಂಗಳೂರು : ಚುನಾವಣಾ ಪ್ರಚಾರದ ವೇಳೆ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾಂಗ್ರೆಸ್ ಶಾಸಕ ರಮಾನಾಥ ರೈ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರ್ಟ್ ಆದೇಶಿಸಿದೆ.ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಅಸೈಗೊಳಿ ಬಳಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರಮಾನಾಥ ರೈ ಮಾತನಾಡುವ ವೇಳೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ್ದರು.ಈ ಹಿನ್ನಲೆಯಲ್ಲಿ ರಾಮನಾಥ ರೈ ವಿರುದ್ಧ ಪ್ರಕರಣ ದಾಖಲಿಸುವಂತೆ ಚಕ್ರವರ್ತಿ ಸೂಲಿಬೆಲಿ ಕೋರ್ಟ್ ಮೆಟ್ಟಿಲೆರಿದ್ದರು.