ಇದೊಂದು ಬಾರಿ ನನ್ನನ್ನು ಗೆಲ್ಲಿಸಿ ಎಂದು ಸಚಿವ ಶ್ರೀರಾಮುಲು ಮೊಳಕಾಲ್ಮೂರಿನ ಮತದಾರರಲ್ಲಿ ಮನವಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಾಪುರ ಗ್ರಾಮದಲ್ಲಿ ಉನ್ನತೀಕರಿಸಿದ ಪ್ರೌಢಶಾಲೆಯನ್ನು ಉದ್ಘಾಟಿಸಿದ ಬಳಿಕ ವೇದಿಕೆ ಮೇಲೆ ಮಾತನಾಡಿದ ಅವರು, ಕೋನಾಪುರ ಗ್ರಾಮಸ್ಥರ ಹಲವು ವರ್ಷಗಳ ಕನಸು ಈಡೇರಿಸಿದ ಸಂತೃಪ್ತಿ ನನಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಉನ್ನತೀಕರಿಸಿದ ಶಾಲೆಗೆ ಪೈಪೋಟಿ ಏರ್ಪಟ್ಟರೂ ಸಹ ಸರ್ಕಾರದ ಹಂತದಲ್ಲಿ ಶ್ರಮಿಸಿ ಈ ಗ್ರಾಮಕ್ಕೆ ಶಾಲೆ ತರಲು ಬಹಳಷ್ಟು ಶ್ರಮ