ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಗೆಲುವು ಸಾಧಿಸಿದ ಬಿಜೆಪಿಗೆ ನಟಿ, ಮಾಜಿ ಸಂಸದೆ ರಮ್ಯಾ ಟ್ವಿಟರ್ ಪೇಜ್ ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯೂ ಆಗಿರುವ ರಮ್ಯಾ ಟ್ವೀಟ್ ಮಾಡಿದ್ದು, ಅಭಿನಂದನೆಗಳು ಬಿಜೆಪಿಗೆ. ಆದರೆ ನಾವು ಇಷ್ಟಕ್ಕೇ ಕೈ ಚೆಲ್ಲಿ ಕೂರಲ್ಲ ಎಂದು ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.ಕಾಂಗ್ರೆಸ್ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಲು ರಮ್ಯಾ ಕೈವಾಡವೂ ಇದೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಮುಂಬರುವ ಕರ್ನಾಟಕ