ಬೆಂಗಳೂರು: ಸಂಸತ್ತಿನಲ್ಲಿ ಪ್ರಧಾನಿ ಮೋದಿ ನನ್ನ ಜತೆ 15 ನಿಮಿಷ ಚರ್ಚೆಯಲ್ಲಿ ಪಾಲ್ಗೊಳ್ಳಲಿ ಎಂದು ಸವಾಲು ಹಾಕಿದ್ದ ರಾಹುಲ್ ಗಾಂಧಿಯನ್ನು ಎದುರಿಸಲು ಪ್ರಧಾನಿ ಮೋದಿಗೆ ಧೈರ್ಯವಿಲ್ಲ ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಲೇವಡಿ ಮಾಡಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ರಮ್ಯಾ ಮೋದಿಗೆ ಅವರು ಹೇಳುವಂತೆ 56 ಇಂಚಿನ ಎದೆ ಇಲ್ಲದೇ ಹೋದರೂ ಸಂಸತ್ತಿನಲ್ಲಿ 15 ನಿಮಿಷ ರಾಹುಲ್ ಗಾಂಧಿಯವರನ್ನು ಎದುರಿಸುವ ಸವಾಲು ಸ್ವೀಕರಿಸುವರೆಂದು ನಂಬಿದ್ದೇನೆ ಎಂದು ರಮ್ಯಾ