ಮಂಡ್ಯ : ಬೇಸಿಗೆ ಬಂತು ಅಂದ್ರೆ ಸಾಕು ಜನರು ಬೀಚ್ಗಳ ಕಡೆ ಮುಖ ಮಾಡ್ತಾರೆ. ಆದ್ರೆ ರಂಗನತಿಟ್ಟು ಪಕ್ಷಿಧಾಮ ಬೇಸಿಗೆಯಲ್ಲೂ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ತನ್ನತ್ತ ಕೈ ಬೀಸಿ ಸೆಳೆಯುತ್ತಿದೆ. ನೀರಿನ ಮಧ್ಯೆ ಬಣ್ಣ-ಬಣ್ಣದ ಪಕ್ಷಿಗಳ ಕಲರವ, ಗೂಡು ನಿರ್ಮಾಣಕ್ಕೆ ಕಡ್ಡಿಗಳನ್ನು ತರುತ್ತಿರುವ ಕೆಲ ಪಕ್ಷಿಗಳು, ತನ್ನ ಮರಿಗಳನ್ನು ಸಂರಕ್ಷಣೆ ಮಾಡುತ್ತಿರುವ ತಾಯಿ, ಸಂತಾನೋತ್ಪತ್ತಿ ಮಾಡುತ್ತಿರುವ ಜೋಡಿ ಹಕ್ಕಿಗಳು, ಮೀನಿನ ಭೇಟೆಗಾಗಿ ಹೊಂಚು ಹಾಕುತ್ತಿರುವ ಮತ್ತಷ್ಟು ಪಕ್ಷಿಗಳು, ಈ