ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಅಪ್ರಾಪ್ತ ಬಾಲಕನನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಮುಸ್ಲಿಂ ಸಮುದಾಯದ ಯುವಕರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿದೆ. ನಿನ್ನೆ ಹಿರಿಯೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕನೊಬ್ಬ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿ ಬಿದ್ದಿದ್ದ. ಈ ಸಂಬಂಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡ ಹಿರಿಯೂರು ಟೌನ್ ಠಾಣೆ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ಚಿತ್ರದುರ್ಗಕ್ಕೆ ಕರೆತಂದಿದ್ರು.