ಕುಡಿದ ಅಮಲಿನಲ್ಲಿ ನಾಲ್ಕುವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಶಂಕಿಸಿ ಯುವಕನೋರ್ವನನ್ನ ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಗದಗ ನಗರದಲ್ಲಿ ನಡೆದಿದೆ. ನಗರದ ಗಂಜಿಬಸವೇಶ್ವರ ಸರ್ಕಲ್ ಬಳಿ ರಾತ್ರಿ ವೇಳೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದೆ. ನಾಲ್ಕು ವರ್ಷದ ಬಾಲಕಿ ರಾತ್ರಿ ಮನೆ ಮುಂದೆ ಆಟವಾಡುತ್ತಿತ್ತು. ಸ್ಥಳಿಯ ಅಶೋಕ ಎಂಬ ಯುವಕ ಕುಡಿದ ಅಮಲಿನಲ್ಲಿ ಮಗುವನ್ನು ಎತ್ತಿಕೊಳ್ಳಲು ಮುಂದಾಗಿದ್ದಾನೆ.ಬಾಲಕಿ ಅಳಲು ಪ್ರಾರಂಭಿಸಿದ್ದರಿಂದ ಕುಡಿದ ಅಮಲಿನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆಂದು ಶಂಕಿಸಿ