ಮೈಸೂರು(ಆ.06): ಮೈಸೂರು ವಿವಿ ಮಾನಸ ಗಂಗೋತ್ರಿಯಲ್ಲಿರುವ ಕ್ವಾಟ್ರಸ್ನಲ್ಲಿ ಸಂಶೋಧನಾ ವಿದ್ಯಾರ್ಥಿನಿಯ ಮೇಲೆ ಪ್ರಾಧ್ಯಾಪಕರೊಬ್ಬರು ಗುರುವಾರ ಮಧ್ಯಾಹ್ನ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಸಂತ್ರಸ್ತ ಮಹಿಳೆಯ ಪರ ಪ್ರಾಧ್ಯಾಪಕನ ಪತ್ನಿಯೇ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೇ ತಪ್ಪಿತಸ್ಥ ಪತಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಮೈಸೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ರಾಮಚಂದ್ರಪ್ಪ ಎಂಬುವರೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರ ಅತಿಥಿಯಾಗಿದ್ದಾರೆ. ಮಂಡ್ಯದಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ