ಕಾಮುಕ ಕ್ರಿಮಿಗಳ ಅಟ್ಟಹಾಸಕ್ಕೆ ಕೊನೆಯಿಲ್ಲದಂತಾಗಿದೆ. ಮನೆಯ ಮಾಲೀಕನೊಬ್ಬ ಅಪ್ರಾಪ್ತ ಬಾಲೆಯ ಮೇಲೆ ಅತ್ಯಾಚಾರವೆಸಗಿದ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಆಗಸ್ಟ್ 17 ರಂದು ಆರೋಪಿ ಮಾಲೀಕ, ಮನೆಯಲ್ಲಿ ಐದು ವರ್ಷದ ಬಾಲಕಿ ಏಕಾಂಗಿಯಾಗಿದ್ದಾಗ ಆಕೆಯ ಮೇಲೆ ಅತ್ಯಾಚಾರೆವೆಸಗಿದ್ದನು. ಗಂಭೀರ ಗಾಯಗಳಿಂದ ಬಳಲುತ್ತಿದ್ದ ಬಾಲೆ ಅರೆಪ್ರಜ್ಞಾವಸ್ಥೆಯಲ್ಲಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಂತರ ಪೋಷಕರು ಬಾಲೆಯನ್ನು ಸೇಂಟ್ಜಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಇಂದು ಸಾವನ್ನಪ್ಪಿದ್ದಾಳೆ.