ಬೆಂಗಳೂರು : ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಹಠಸಂಭೋಗ ನಡೆಸಿದ, ಪ್ರಕರಣದಲ್ಲಿ ನಗರದ ಇಟ್ಟಮಡು ನಿವಾಸಿ ಬಾಬು ಅಲಿಯಾಸ್ ಚಿಟ್ಟಿಬಾಬು ಎಂಬಾತನಿಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೋ) ಅಡಿ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ 3ನೇ ಹೆಚ್ಚುವರಿ ತ್ವರಿತಗತಿ ವಿಶೇಷ ನ್ಯಾಯಾಲಯ ಆದೇಶಿಸಿದೆ.ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಇಷ್ರತ್ ಜಹಾನ್ ಅವರು ಅತ್ಯಾಚಾರ, ಅಪಹರಣ ಮತ್ತು ಅಪ್ರಾಪ್ತೆಯ ಮೇಲ ಲೈಂಗಿಕ