ಗಣೇಶ ಚತುರ್ಥಿ ಅಗಮಿಸುತ್ತಿದ್ದಂತೆ ಎಲ್ಲರ ಮನೆಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಗಣೇಶ ಚೌತಿಗೆ ಮಾಡುವ ಗಣೇಶನಿಗೆ ಪ್ರಿಯವಾದ ಚಕ್ಕುಲಿ ಕಂಬಳ ಮಾಡುವ ಕೆಲಸ ಎಲ್ಲೆಡೆ ಸಂಭ್ರಮದಿಂದ ಕೆಲಸ ಸಾಗಿದೆ.ಶಿರಸಿಯ ಹೆಗಡೆಕಟ್ಟಾ ಸಮೀಪದ ಕಲ್ಮನೆ ಊರಿನಲ್ಲಿ ಎಲ್ಲರೂ ಚಕ್ಕುಲಿ ಕಂಬಳ ಮಾಡುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಅದರಲ್ಲೂ ಉತ್ತರಕನ್ನಡ ಜಿಲ್ಲೆ ಶಿರಸಿಯ ಕೆಲವೇ ಕಡೆ ಮೊದಲಿನಿಂದಲೂ ರೂಢಿಯಲ್ಲಿರುವ ಕೈ ಚಕ್ಕುಲಿ ಕಂಬಳ ಶುರುವಾಗಿದೆ. ಎಲ್ಲ ಕಂಬಳದಂತೆ ಇಲ್ಲೂ ಕಲ್ಮನೆ ಹೆಗ್ಗಾರು, ಹೆಗಡೆಕಟ್ಟಾ