ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಾಸರಕೊಡ ಟೊಂಕಾದಲ್ಲಿ ಲಲಿತಾ ಕಂಪನಿಯ ಜಗದೀಶ್ ತಾಂಡೇಲರ ‘ಪ್ರೀಶಾ’ ಬೋಟಿಗೆ 15 ಕೆಜಿ ತೂಕದ ವಿರಳವಾಗಿ ಸಿಗುವ ಸನ್ ಫಿಶ್ ಬಲೆಗೆ ಬಿದ್ದಿದೆ.ಕರ್ನಾಟಕ ಕರಾವಳಿ ಭಾಗದಲ್ಲಿ ಈ ಮೀನು ಅಪರೂಪಕ್ಕೆ ಮೀನುಗಾರರ ಬಲೆಗೆ ಬೀಳುತ್ತವೆ.ಇಷ್ಟು ವರ್ಷದಲ್ಲಿ ಒಂದೆರೆಡು ಬಾರಿ ಮಾತ್ರ ಮೀನುಗಾರರ ಬಲೆಗೆ ಬಿದ್ದಿರುವ ಕುರಿತು ಕಡಲ ವಿಜ್ಞಾನಿಗಳು ದಾಖಲಿಸಿದ್ದಾಗಿ ಕಾರವಾರದ ಕಡಲ ಜೀವಶಾಸ್ತ್ರ ವಿಭಾಗದ ತಜ್ಞ ಶಿವಕುಮಾರ್ ಹರಗಿಯವರು ಮಾಹಿತಿ