ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲದೇ ಚುನಾವಣೆ ಎದುರಿಸುತ್ತಿದ್ದೇನೆ. ನಕಾರಾತ್ಮಕ ಪ್ರಚಾರದ ಪ್ರಯತ್ನಗಳು ನಡೆದರೂ ಅವುಗಳು ಪರಿಣಾಮ ಬೀರುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ನಡೆಸಿದ ಜನ ಸಂಕಲ್ಪ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಜೆಟ್ ಅಧಿವೇಶನದ ಬಳಿಕ ನಾಲ್ಕು ಕಡೆಯಿಂದ ರಥಯಾತ್ರೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ನವದೆಹಲಿಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಮುಗಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಪಕ್ಷದ ಕಾರ್ಯಕಾರಿಣಿಯಲ್ಲಿ ಹಲವು