ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಟಿಕೆಟ್ ದೊರೆಯದಿದ್ದರೆ ಪಕ್ಷ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮುಖಂಡರು ಎಚ್ಚರಿಸಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದಿಂದ ಈಶ್ವರಪ್ಪ ಅವರಿಗೆ ಟಿಕೆಟ್ ನೀಡಬಾರದು ಎಂಬ ಚರ್ಚೆ ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ರಾಯಣ್ಣ ಬ್ರಿಗೇಡ್ ಮುಖಂಡರು ಅಮಿತ್ ಶಾ ಅವರಿಗೆ ಪತ್ರವನ್ನು ಬರೆದಿದ್ದು, ಈಶ್ವರಪ್ಪ ಅವರಿಗೆ ಟಿಕೆಟ್ ತಪ್ಪಿಸಿದರೆ ಗಂಭೀರ ಪರಿಣಾಮ