ಉಡುಪಿ: ನೊಂದ ಜೀವಗಳ ಕಣ್ಣೀರು ಸುರಿಸುತ್ತಿರುವಾಗ ನಾನು ಯಾವ ಪುರುಷಾರ್ಥಕ್ಕೆ ಪ್ರಶಸ್ತಿ ಸ್ವೀಕರಿಸಲಿ. ಹೀಗಾಗಿ ನಾನು ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸುವುದಿಲ್ಲ ಎಂದು ಉಡುಪಿಯ ಸಮಾಜಸೇವಕ ಡಾ. ರವೀಂದ್ರನಾಥ ಶಾನುಭಾಗ್ ಹೇಳಿದ್ದಾರೆ. ನನಗೆ ಸ್ವರ್ಗ ಕೊಟ್ಟರೂ ಬೇಡ. ನನಗೆ ಒಂದು ನ್ಯಾಯ ಕೊಡಿ. ನನ್ನ ಸಮಾಜ ಸೇವೆ ಪೂರ್ತಿಯಾಗಿಲ್ಲ. ಪೂರ್ತಿಯಾಗಲು ಜನಪ್ರತಿನಿಧಿಗಳು ಬಿಡುವುದಿಲ್ಲ. ಓಟು ಬೇಡಿದವರ ಬಳಿ ಜನ ನ್ಯಾಯ ಬೇಡುತ್ತಿದ್ದಾರೆ. ಇಂತಹ ಪರಿಸ್ಥಿತಿ ದೇಶದಲ್ಲಿ, ರಾಜ್ಯದಲ್ಲಿ ಇದೆ ಅನ್ನೋದು ನಾಚಿಕೆಗೇಡಿನ ವಿಚಾರ