ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಹಾಯ್ ಬೆಂಗಳೂರು ಸಂಸ್ಥಾಪಕ ರವಿ ಬೆಳಗೆರೆ ಅವರಿಗೆ ಮೂರು ದಿನಗಳ ಮಧ್ಯಂತರ ಜಾಮೀನು ದೊರೆತಿದೆ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಸಿಟಿ ಸಿವಿಲ್ ಕೋರ್ಟ್ ಬುಧವಾರ ಮೂರು ದಿನಗಳ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ. ತನಿಖೆಗೆ ಸಹಕರಿಸುವಂತೆ ಸೂಚಿಸಿರುವ