ಬೆಂಗಳೂರು : ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುವ ಸಂದರ್ಭದಲ್ಲಿ ತಮ್ಮ ಮಾತಿಗೆ ಮಧ್ಯ ಪ್ರವೇಶಿಸಿದ ಪೂಜಾರ್ ಮತ್ತು ರವಿಕುಮಾರ್ ಅವರಿಗೆ ನಾವೂ ಶೂದ್ರರು, ನೀವೂ ಶೂದ್ರರು ಇದೆಲ್ಲಾ ಬೇಕಾ ಎಂದು ಕಾಲೆಳೆದರು.ನಾನೂ ಶೂದ್ರ-ನೀವೂ ಶೂದ್ರರು-ರವಿಕುಮಾರ್ ಕೂಡ ಶೂದ್ರರು. ಹೀಗಿದ್ದೂ ಯಾಕ್ರೀ ಇದೆಲ್ಲಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯ ಶ್ರೀನಿವಾಸ್ ಪೂಜಾರಿ ಮತ್ತು ರವಿಕುಮಾರ್ ಅವರನ್ನು ಪ್ರಶ್ನಿಸಿದ ಘಟನೆ ಬುಧವಾರ ನಡೆಯಿತು. ಪ್ರಬಲ ವಿರೋಧ ಪಕ್ಷ ಪ್ರಜಾಪ್ರಭುತ್ವಕ್ಕೆ ಪೂರಕ. ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ನುಡಿದ ಸಿಎಂ,