ಸಂಗೊಳ್ಳಿ ರಾಯಣ್ಣ ಬ್ರಿಗೇಡ್ನ ದಲಿತ ಹಿಂದೂಳಿದವರಿಗೆ ಬಿಜೆಪಿಯಲ್ಲಿ ಸ್ಥಾನ ನೀಡುವುದಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನನಗೆ ಒಬಿಸಿ ರಾಜ್ಯ ಉಸ್ತುವಾರಿಯನ್ನು ವಹಿಸಿದ್ದು ಅದರಂತೆ ಕಾರ್ಯನಿರ್ವಹಿಸುತ್ತಿದ್ದೇನೆ. ರಾಷ್ಟ್ರಾಧ್ಯಕ್ಷರ ಆದೇಶದಂತೆ ಬ್ರಿಗೇಡ್ ಪದಾಧಿಕಾರಿಗಳಿಗೆ ಬಿಜೆಪಿಯಲ್ಲಿ ಹುದ್ದೆ ದೊರೆಯಲಿದೆ ಎಂದು ತಿಳಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ದಲಿತರ, ಹಿಂದುಳಿದವರ, ಶೋಷಿತರ ಏಳಿಗೆಗಾಗಿ