ಜಿಲ್ಲಾ ಕ್ರೀಡಾಂಗಣದಲ್ಲಿ ಹೆಚ್.ಕೆ.ಆರ್.ಡಿ.ಬಿ. ಅನುದಾನದಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳಿಗೆ ಪ್ರಥಮಾದ್ಯತೆ ನೀಡಿ ಪೂರ್ಣಗೊಳಿಸಬೇಕು ಎಂದು ಪ್ರಾದೇಶಿಕ ಆಯುಕ್ತರು ಸೂಚನೆ ನೀಡಿದ್ದಾರೆ.ಕಲಬುರಗಿ ನಗರದ ಚಂದ್ರಶೇಖರ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಹೆಚ್.ಕೆ.ಆರ್.ಡಿ.ಬಿ. ಅನುದಾನದಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳಿಗೆ ಪ್ರಥಮಾದ್ಯತೆ ನೀಡಿ ಪೂರ್ಣಗೊಳಿಸಬೇಕು ಎಂದು ಅನುಷ್ಠಾನ ಏಜೆನ್ಸಿಗಳಿಗೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಹೆಚ್.ಕೆ.ಆರ್.ಬಿ. ಕಾರ್ಯದರ್ಶಿ ಸುಬೋಧ ಯಾದವ ಸೂಚಿಸಿದರು. ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿಯ ತಮ್ಮ ಕೊಠಡಿಯಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು