2018ರಲ್ಲಿ ಇದೇ ತನ್ನ ಕೊನೆ ಚುನಾವಣೆ ಎಂದು ಹೇಳಿ ಮತಪ್ರಚಾರ ನಡೆಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಈ ಬಾರಿ ಚುನಾವಣೆಯಲ್ಲೂ ಸ್ಪರ್ಧಿಸಿದ್ರು.. ಇದೀಗ ತಾನೆ ಸಿಎಂ ಆಗಬೇಕೆಂದು ಪಟ್ಟು ಹಿಡಿದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. AICC ವರಿಷ್ಠರ ಭೇಟಿಗೆ ಸಿದ್ದರಾಮಯ್ಯ ಮುಂದಾಗಿದ್ದು, ಸಂಜೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಯನ್ನು ಭೇಟಿ ಮಾಡಲಿದ್ದಾರೆ. ಹೈಕಮಾಂಡ್ ಮುಂದೆ ಸಿದ್ದರಾಮಯ್ಯ ವಾದವೇನು ಎಂಬುದನ್ನು ನೋಡುವುದಾದರೆ,