ಪಂಚ ರಾಜ್ಯ ಚುನಾವಣೆಗಳಲ್ಲಿ ಹಿನ್ನೆಡೆಯಾದ ನಂತರ ಎಚ್ಚೆತ್ತುಕೊಂಡಿರುವ ಪ್ರಧಾನಿ ಮೋದಿ ಅವರು, ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರೈತರು, ಸಣ್ಣ ವ್ಯಾಪಾರಸ್ಥರು ಮತ್ತು ಮಧ್ಯಮ ವರ್ಗದವರ ಓಲೈಕೆಗೆ ಮುಂದಾಗಿದ್ದಾರೆ. ಜನಪ್ರಿಯ ಯೋಜನೆಗಳನ್ನು ಬಜೆಟ್ನಲ್ಲಿ ಪ್ರಕಟಿಸುವ ಸಾಧ್ಯತೆಗಳು ನಿಚ್ಚಳವಾಗಿವೆ.ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲೂ ಅತಂತ್ರ ಲೋಕಸಭೆ ಸೃಷ್ಠಿಯಾಗಲಿದೆ. ಬಿಜೆಪಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೂ ಬಹುಮತಕ್ಕೆ ಕೆಲ ಸ್ಥಾನಗಳು ಕೊರತೆಯಾಗಬಹುದು ಎಂದು ಹೇಳಿರುವುದು ಬಿಜೆಪಿಯ ನಿದ್ದೆಗೆಡಿಸಿದ್ದು, ಈ