ಲೋಕಸಭಾ ಹಾಗೂ ಸ್ಥಳೀಯ ಚುನಾವಣೆ ಹಿನ್ನಲೆಯಲ್ಲಿ ರಾಷ್ಟ್ರೀಯ ಪಕ್ಷಗಳ ರಣಕಹಳೆ ಜೋರಾಗಿದೆ. ಗಡಿನಾಡಿನಿಂದ ಬಿಜೆಪಿ ರಾಜ್ಯಾಧ್ಯಕ್ಷರ ಪ್ರವಾಸದ ಬೆನ್ನಲ್ಲೇ ಈಗ ಕಾಂಗ್ರೆಸ್ ಅಧ್ಯಕ್ಷ ಭೇಟಿ ನೀಡಿದ್ದಾರೆ.ಗಡಿನಾಡು ಬೀದರನಿಂದಲೆ ರಣಕಹಳೆ ಮೊಳಗಿಸಲು ರಾಷ್ಟ್ರೀಯ ಪಕ್ಷಗಳು ಮುಂದಾಗಿವೆ. ಲೋಕಸಭಾ ಹಾಗೂ ಸ್ಥಳೀಯ ಚುನಾವಣೆಗೆ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಾಜ್ಯ ಪ್ರವಾಸ ನಡೆಸುತ್ತಿರುವ ಬೆನ್ನಲ್ಲೆ ಈಗ ಕೋಟೆ ನಗರಿ ಬೀದರ್ ಗೆ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದಾರೆ.