ನಗರದಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರೆದಿದ್ದು, ಕೇರಳ ಮೂಲದ ಉದ್ಯಮಿ ಪರಚೂರಿ ಸುರೇಂದ್ರ ಎನ್ನುವವನ್ನು ಬೈಕ್ನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಸುರೇಂದ್ರ ತಮ್ಮ ಕಚೇರಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿರುವಾಗ ಮನೆಯ ಹತ್ತಿರದಲ್ಲಿಯೇ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಆರೋಪಿಗಳು ಗುಂಡುಹಾರಿಸಿ ಹತ್ಯೆಗೈದಿದ್ದಾರೆ. ಗಂಭೀರವಾಗಿ ಗಾಯಗೊಂಡ ಸುರೇಂದ್ರರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸೆಕ್ಯೂರಿಟಿ