ಬೆಂಗಳೂರು : ಕೊರೊನಾ ಭೀತಿಯ ನಡುವೆ ಇದೀಗ ಬಿಜೆಪಿಯಲ್ಲಿ ಬಂಡಾಯ ಭುಗಿಲೆದಿದ್ದು, ಈ ಹಿನ್ನಲೆಯಲ್ಲಿ ಇಂದು ಸಿಎಂ ತುರ್ತು ಸಭೆ ಕರೆದಿದ್ದಾರೆ.ಬಿಜೆಪಿ ನಾಯಕರಾದ ಉಮೇಶ್ ಕತ್ತಿ, ಮುರಗೇಶ್ ನಿರಾಣಿ ಮತ್ತು ಬಸನಗೌಡ ಪಾಟೀಲ್ ಸಿಎಂ ವಿರುದ್ಧ ಸಂಚು ರೂಪಿಸಿ ಸಭೆ ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸಿಎಂ ಬಿಎಸ್ ವೈ ಉಮೇಶ್ ಕತ್ತಿ ಹಾಗೂ ನಿರಾಣಿ ಅವರಿಗೆ ಫೋನ್ ಮಾಡಿ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.