ಬ್ರಹ್ಮಗಿರಿ ತಪ್ಪಲು ಪ್ರದೇಶದಲ್ಲಿ ವರುಣನ ಅಬ್ಬರ ಹೆಚ್ಚಿದೆ. ತಲಕಾವೇರಿ ಭಾಗಮಂಡಲದಲ್ಲಿ ಮಳೆ ಹೆಚ್ಚಾದ ಹಿನ್ನಲೆ, ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ನಾಪೋಕ್ಲು ಭಾಗಮಂಡಲ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ನಾಪೋಕ್ಲು ಭಾಗಮಂಡಲ ಸಂಪರ್ಕ ಸಂಪೂರ್ಣ ಬಂದ್ ಆಗಿದ್ದು, ಮಡಿಕೇರಿ ಭಾಗಮಂಡಲ ಮಡಿಕೇರಿ ರಸ್ತೆ ಮೇಲೆ ಸುಮಾರು 2 ಅಡಿಗಳಷ್ಟು ನೀರು ನಿಂತಿದ್ದು, ಮತ್ತಷ್ಟು ಮಳೆ ಹೆಚ್ಚಾದಲ್ಲಿ ಭಾಗಮಂಡಲಕ್ಕೆ ಸಂಪೂರ್ಣ ಬಂದ್ ಸಾಧ್ಯತೆಯಿದೆ. ಹೀಗಾಗಿ