ಭಾರೀ ಮಳೆಯಿಂದಾಗಿ ರಾಜ್ಯದ ಬಹುತೇಕ ಜಿಲ್ಲೆಗಳು ಜಲಾವೃತಗೊಳ್ಳುತ್ತಿವೆ.ಕೆಲವು ಸಮಯ ಕಡಿಮೆ ಯಾದಂತೆ ಕಂಡು ಬಂದ ಮಳೆರಾಯ ಮತ್ತೆ ತನ್ನ ಆರ್ಭಟ ಮುಂದುವರಿಸಿದ್ದಾನೆ. ಇದರಿಂದಾಗಿ ಬಹುತೇಕ ಪ್ರದೇಶಗಳಲ್ಲಿನ ನೂರಾರು ಮನೆಗಳು ಜಲಾವೃತಗೊಂಡಿವೆ. ಮಣ್ಣು ಕುಸಿದು ರಸ್ತೆ ಸಂಚಾರ ಸ್ಥಗಿತಗೊಂಡಿದ್ದರೆ, ಸೇತುವೆಗಳು ಮುಳುಗಡೆಯಾಗಿ ಸಂಚಾರ ಬಂದ್ ಆಗಿವೆ.6 ಜಿಲ್ಲೆಗಳಲ್ಲಿ ಮುಂಜಾಗೃತ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ