Karnataka Rains Today:(ಜು.29): ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿದ್ದು, ಪ್ರವಾಹ ಮಟ್ಟವೂ ಇಳಿಕೆಯಾಗುತ್ತಿದೆ. ಹೀಗಾಗಿ ನದಿ ತೀರದ ಜನರು ನಿಟ್ಟುಸಿರು ಬಿಡುವಂತಾಗಿದೆ. ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.