ಕಲಬುರಗಿ : ಕಾಂಗ್ರೆಸ್ ಪಕ್ಷ ತೊರೆಯುವುದಾಗಿ ತಂದೆ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರುತ್ತಾರೆ ಎಂಬುದು ಸುಳ್ಳು ಸುದ್ದಿ ಎಂದು ಅಫಜಲಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರ ಪುತ್ರ ಫರ್ಹತಾಬಾದ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಿತೇಶ್ ಗುತ್ತೇದಾರ್ ಅವರು ಹೇಳಿದ್ದಾರೆ.ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡದ ರೀತೇಶ್ ಅವರು, ಕಾಂಗ್ರೆಸ್ ಪಕ್ಷದಲ್ಲಿ ನಮ್ಮ ತಂದೆಯವರಿಗೆ ಅನ್ಯಾಯವಾಗಿದ್ದು ನಿಜ. ರಾಜ್ಯ ಕಾಂಗ್ರೆಸ್ನಲ್ಲಿ ಹಿರಿಯ ಶಾಸಕರಾಗಿದ್ದರೂ