ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ರೈತರ ಧರಣಿ ಹಿಂಪಡೆದಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ ಪ್ರತಿಭಟನೆ ನಿರತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಬ್ಬಿನ ಬಾಕಿ ಸೇರಿದಂತೆ, ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಮನವೊಲಿಸಿ ಧರಣಿ ಹಿಂಪಡೆಯುವಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಹಲವು ರೈತ ನಾಯಕರಿಗೆ ಎಳನೀರು ಕುಡಿಸಿ, ಧರಣಿಗೆ ತೆರೆ ಎಳೆದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಿ.ಕೆ. ಶಿವಕುಮಾರ್, ರೈತರ ಸಮಸ್ಯೆ