ಕೊರೊನಾ ವೈರಸ್ ತಡೆಗಟ್ಟೋಕೆ ಅಂತ ಇದೀಗ ಪ್ರಾದೇಶಿಕ ಆಯುಕ್ತರೇ ಫಿಲ್ಡಿಗೆ ಇಳಿದಿದ್ದಾರೆ. ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ಎನ್.ವಿ.ಪ್ರಸಾದ ಅವರು ಕಲಬುರಗಿ ನಗರದ ಜನದಟ್ಟಣೆ ಪ್ರದೇಶಗಳಾದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಶರಣಬಸವೇಶ್ವರ ದೇವಸ್ಥಾನ ಹಾಗೂ ಖಾಜಾ ಬಂದೇನವಾಜ್ ದರ್ಗಾ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಕೊರೋನಾ ವೈರಸ್ ಹರಡದಂತೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.ಕಲಬುರಗಿ ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಕೊರೋನಾ ವೈರಸ್ ಸೋಂಕು ಪರೀಕ್ಷೆಗೆ