ಹುಬ್ಬಳ್ಳಿ : ಸ್ಟಾರ್ಟ್ಅಪ್ ಕೇಂದ್ರಗಳು ಬೆಂಗಳೂರು ಕೇಂದ್ರೀಕೃತವಾಗಿದ್ದು, ಹುಬ್ಬಳ್ಳಿ ಮತ್ತು ಕಲಬುರ್ಗಿಯಲ್ಲಿ ಪ್ರಾದೇಶಿಕ ಕಚೇರಿ ತೆರೆದು ಅವುಗಳನ್ನು ವಿಸ್ತರಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಾಲೇಜಿನ 75ನೇ ವರ್ಷಾಚರಣೆ ಮತ್ತು ಕೆಎಲ್ಇ ಟೆಕ್ ಪಾರ್ಕ್ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳು ಹೆಚ್ಚಾಗಿ ಬೆಂಗಳೂರಿನಲ್ಲಿಯೇ ಇವೆ. ಇದರಿಂದಾಗಿ ಬೆಂಗಳೂರು ಐಟಿ, ಬಿಟಿ ಕ್ಷೇತ್ರದಲ್ಲಿ ಸಾಕಷ್ಟು