ಬೆಂಗಳೂರು : ನಾನು 5 ಬಾರಿ ಮರುಜನ್ಮ ಪಡೆದಿದ್ದೇನೆ, ಈ ಬಾರಿ ಸ್ವಲ್ಪ ತಡ ಮಾಡಿದ್ದರೂ ಇವತ್ತು ನಿಮ್ಮ ಜೊತೆ ಮಾತನಾಡಲು ಆಗುತ್ತಿರಲಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಘಾತಕಾರಿ ಅನುಭವಗಳನ್ನ ಹಂಚಿಕೊಂಡಿದ್ದಾರೆ. ಪಾರ್ಶ್ವವಾಯು ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಚ್.ಡಿ ಕುಮಾರಸ್ವಾಮಿ ಅವರಿಂದು ಡಿಸ್ಚಾರ್ಜ್ ಆಗಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಂದೆ-ತಾಯಿ ಅಶೀರ್ವಾದದಿಂದ ನಾನು ಇಲ್ಲಿದ್ದೇನೆ, ನನಗೆ ಪುನರ್ಜನ್ಮ ಬಂದಿದೆ. ದೇವರ ದಯೆಯಿಂದ