ಬರಗಾಲದಿಂದ ತತ್ತರಿಸುತ್ತಿರುವ, ಕುಡಿಯುವ ನೀರಿಗೆ ಹಾಹಾಕಾರ ಪಡುತ್ತಿರುವ ಜನರ ಆರೋಗ್ಯ ವಿಚಾರಿಸುವ ಬದಲು ರಾಜ್ಯದ ಮುಖ್ಯಮಂತ್ರಿ ರೆಸಾರ್ಟ್ನಲ್ಲಿ ವಿಶ್ರಾಂತಿ ತಗೆದುಕೊಳ್ಳುತ್ತಿದ್ದಾರೆ. ಅವರ ಮಂತ್ರಿಗಳು ಚುನಾವಣೆಯಲ್ಲಿ ಬ್ಯೂಸಿಯಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಟೀಕೆ ಮಾಡಿದ್ದಾರೆ.ಚಿಂಚೋಳಿ ವಿಧಾನಸಭಾ ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿ ಡಾ. ಅವಿನಾಶ್ ಜಾಧವ್ ಪರ ಪ್ರಚಾರ ನಡೆಸಿದ ಆರ್. ಅಶೋಕ ಮೈತ್ರಿ ಸರಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಪಕ್ಷದ ಆಂತರಿಕ ಸಮೀಕ್ಷೆಯ ಪ್ರಕಾರ ರಾಜ್ಯದಲ್ಲಿ ಬಿಜೆಪಿಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು,