ಕೊನೆಗೂ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ ಪಟ್ಟಿಯನ್ನು ಎಐಸಿಸಿ ಅಧಿಕೃತ ಘೋಷಣೆ ಮಾಡಿದೆ. ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನೇಮಕಾತಿಗೆ ಕಾಂಗ್ರೆಸ್ ಹೈಕಮಾಂಡ್ ಅಂಕಿತ ಹಾಕಿದೆ. ಚುನಾವಣೆ ವರ್ಷದಲ್ಲೇ ಎಐಸಿಸಿ ನೇಮಕಗೊಳಿಸಿದ್ದು, ಮೊದಲ ಹಂತದಲ್ಲಿ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ನೇಮಕ ಮಾಡಿದೆ. 40 ಮಂದಿಗೆ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನ ಹಾಗೂ 109 ಮಂದಿಗೆ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ. ಮಾಜಿ ಸಚಿವ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ