ಹಿಂದಿನ ವರ್ಷಗಳಲ್ಲಿ ಅತಿವೃಷ್ಟಿಯಿಂದ ನದಿ ತಟದಲ್ಲಿರುವ 10-15 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿತ್ತು. ಆದರೆ ಈ ಬಾರಿ ಅತಿವೃಷ್ಟಿಯಿಂದ ರಾಜ್ಯಾದ್ಯಂತ ನಷ್ಟ ಸಂಭವಿಸಿದೆ. ಚಿಕ್ಕಬಳ್ಳಾಪುರ, ಕೋಲಾರಗಳಂತಹ ಅತ್ಯಂತ ಬರ ಪೀಡಿತ ಜಿಲ್ಲೆಗಳಲ್ಲೂ ಕೆರೆ-ಕಟ್ಟೆ ತುಂಬಿ ಒಡೆದಿದೆ. ಬೆಳೆದು ನಿಂತ ಪೈರಿಗೆ ಹಾನಿಯಾಗಿ, ಬೆಳೆ ಕೈಗೆ ಸಿಗುವ ಕಾಲದಲ್ಲಿ ರೈತರಿಗೆ ನಷ್ಟವಾಗಿದೆ. ರೈತರ ಕಷ್ಟಕ್ಕೆ ಸ್ಪಂದಿಸಿದ ಸರ್ಕಾರ ಅಧಿಕಾರಿಗಳಿಗೆ ಕೂಡಲೇ ಜಂಟಿ ಸಮೀಕ್ಷೆ ಕೈಗೊಂಡು ವರದಿಯನ್ನು ಪರಿಹಾರ ಚಿಠಿಠಿನಲ್ಲಿ ಅಪ್ಲೋಡ್