ದೇಶದಲ್ಲಿ ಧಾರ್ಮಿಕ ಭಾವನೆ ಹೆಚ್ಚಾಗುತ್ತಿದ್ದು, ಬಾಹುಬಲಿಯ ಮಹಾಮಸ್ತಕಾಭಿಷೇಕದಲ್ಲಿ ಪಾಲ್ಗೊಂಡಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಹಾಸನ ಜಿಲ್ಲೆಯ ಶ್ರವಣಬೆಳಗೊಳದ ಬಾಹುಬಲಿಯ ಮಹಾ ಮಸ್ತಕಾಭಿಷೇಕದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹನ್ನೆರಡು ವರ್ಷಗಳಲ್ಲಿ ಒಮ್ಮೆ ಮಹಾಪರ್ವ ಆಗುತ್ತದೆ. ಇಂತಹ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯಾಗಿ ಈ ಸೇವೆ ಸಲ್ಲಿಸಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ, ಸೌಭಾಗ್ಯ ಎಂದಿದ್ದಾರೆ. ಪವಿತ್ರ ಸಂದರ್ಭದಲ್ಲಿ ನಿಮ್ಮ ಆಶೀರ್ವಾದ ಪಡೆಯುವ